Karwar| ನಗರದ ಪ್ರಮುಖ ರಸ್ತೆಗಳಲ್ಲಿ ಅತಿಕ್ರಮಣ ಮಾಡಿದ್ದ ಗೂಡಂಗಡಿಗಳ ವಿರುದ್ಧ ಕಾರವಾರ ನಗರಸಭೆ ಅಧಿಕಾರಿಗಳು ಕಠಿಣ ಕ್ರಮ ಕೈಗೊಂಡಿದ್ದಾರೆ.

ನಗರದ ವಿವಿಧ ಪ್ರದೇಶಗಳಲ್ಲಿ, ವಿಶೇಷವಾಗಿ ರಸ್ತೆ ಮೇಲೆ ಗೂಡಂಗಡಿಗಳ ಫ್ರಿಡ್ಜ್ ಹಾಗೂ ಇತರೆ ವಸ್ತುಗಳನ್ನು ಇಟ್ಟು ಸಂಚಾರಕ್ಕೆ ಅಡಚಣೆ ಉಂಟುಮಾಡಲಾಗುತ್ತಿದೆ ಎಂಬ ಆರೋಪಗಳು ಸಾರ್ವಜನಿಕರ ವಲಯದಿಂದ ಕೇಳಿಬಂದ ಹಿನ್ನೆಲೆಯಲ್ಲಿ, ನಗರಸಭೆ ಸಿಬ್ಬಂದಿಗಳು ಅದನ್ನು ತೆರವುಗೊಳಿಸುವ ಕಾರ್ಯಾಚರಣೆಗೆ ಮುಂದಾದರು.

ಜೆಸಿಬಿ ಯಂತ್ರಗಳ ಸಹಾಯದಿಂದ ಪಿಕಳೆ ರಸ್ತೆ, ಎಂಜಿ ರಸ್ತೆ, ಗ್ರೀನ್ ಸ್ಟ್ರೀಟ್ ಸೇರಿದಂತೆ ಹಲವು ಕಡೆಗಳಲ್ಲಿ ಅತಿಕ್ರಮಣ ತೆರವುಗೊಳಿಸಲಾಯಿತು. ರಸ್ತೆ ಮೇಲೆ ಇಡಲಾಗಿದ್ದ ವಸ್ತುಗಳನ್ನು ವಶಕ್ಕೆ ಪಡೆದು ತೆರವುಗೊಳಿಸಲಾಯಿತು.
ಅಂಗಡಿಯವರಿಂದ ತೀವ್ರ ವಿರೋಧ ವ್ಯಕ್ತವಾಗುವ ಸಾಧ್ಯತೆ ಇದ್ದ ಹಿನ್ನೆಲೆಯಲ್ಲಿ, ಬುಧವಾರ ಬೆಳಿಗ್ಗೆಯೇ ಕಾರ್ಯಾಚರಣೆ ಆರಂಭಿಸಿ ಯಶಸ್ವಿಯಾಗಿ ಪೂರ್ಣಗೊಳಿಸಲಾಯಿತು.
ನಗರದಲ್ಲಿ ಸಂಚಾರ ಸುಗಮಗೊಳಿಸುವ ಉದ್ದೇಶದಿಂದ ಮುಂದಿನ ದಿನಗಳಲ್ಲೂ ಇಂತಹ ಕಾರ್ಯಾಚರಣೆಗಳು ಮುಂದುವರೆಯಲಿವೆ ಎಂದು ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ.
