ಆಡಿಯೋ ಹಾಗೂ ವಿಡಿಯೋ ಮೂಲಕ ಮಹಿಳೆಯರ ಜತೆ ಅಸಭ್ಯವಾಗಿ ವರ್ತಿಸಿದ ಹಿನ್ನೆಲೆ ಸಸ್ಪೆಂಡ್ ಆಗಿದ್ದ ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧ ಇದೀಗ ಶಿಕ್ಷಕಿಯೋರ್ವರ ಮೇಲೆ ಅತ್ಯಾಚಾರ ಮಾಡಿರುವ ಆರೋಪದ ಮೇಲೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಮುಖ್ಯ ಶಿಕ್ಷಕಿಯಾಗಿದ್ದ ಮಹಿಳೆ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಈ ದೂರು ನೀಡಿದ್ದಾರೆ.

2018 ರಿಂದ 2023 ರ ನಡುವೆ ಮನೆಗೆ ಬಂದು ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಬಲವಂತವಾಗಿ ಅತ್ಯಾಚಾರ ಮಾಡಿರುವ ಬಗ್ಗೆ ಮಾ.21 ರಂದು ಸಂಜೆ ವೇಣೂರು ಪೊಲೀಸ್ ಠಾಣೆಯಲ್ಲಿ ನೊಂದ ಮಹಿಳೆ ದೂರು ನೀಡಿದ್ದಾರೆ.
ಈ ಹಿನ್ನೆಲೆ ಪೊಲೀಸರು ಇನ್ಸ್‌ಪೆಕ್ಟರ್ ಸಂದೇಶ್ ಪಿ. ಜಿ. ವಿರುದ್ಧ 376(2)(a)(1),376(2)(n),384,506 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
