Madduru| ಪ್ರಚೋದನಕಾರಿ ಭಾಷಣ ಆರೋಪದ ಮೇಲೆ ಬಸನಗೌಡ ಪಾಟೀಲ ಯತ್ನಾಳ ಹಾಗೂ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಮಂಡ್ಯದ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೋಮವಾರ ಮಂಡ್ಯ ಜಿಲ್ಲೆಯ ಮದ್ದೂರಿನ ಹಳೆ ಬಸ್ ನಿಲ್ದಾಣದ ಬಳಿ ಹಿಂದೂ ಪರ ಸಂಘಟನೆಗಳು ಆಯೋಜಿಸಿದ್ದ’ ಬಲಿದಾನ್‌ ದಿವಸ್’ ಕಾರ್ಯಕ್ರಮದಲ್ಲಿ ಈ ಇಬ್ಬರೂ ಭಾಷಣ ಮಾಡಿದ್ದರು.

ಬಹಿರಂಗ ಸಭೆಯಲ್ಲಿ ರೋಷಾವೇಷದ ಮಾತುಗಳ ಮೂಲಕ ಪ್ರಚೋದನಕಾರಿ ಭಾಷಣ ಮಾಡಿ, ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ ಆರೋಪದ ಮೇರೆಗೆ, ಮದ್ದೂರು ನಗರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 196 (1)(A)BNS ಆಕ್ಟ್ ಪ್ರಕಾರ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.