Karwar| ಉತ್ತರ ಕನ್ನಡ ಸೇರಿದಂತೆ ರಾಜ್ಯದ ಮೂರು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆಯು ಮಿಂಚು-ಗುಡುಗು ಸಹಿತ ಮಳೆಯ ಎಚ್ಚರಿಕೆ ನೀಡಿದೆ.

ಇಂದು ಗುರುವಾರ ಮಧ್ಯಾಹ್ನ 3:19 ರಿಂದ ಸಂಜೆ 6:19ರವರೆಗೆ ಉತ್ತರಕನ್ನಡ, ಬೆಳಗಾವಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವೆಡೆ ಮಿಂಚು-ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.
ಐಎಂಡಿ ನೀಡಿರುವ ಮಾಹಿತಿ ಪ್ರಕಾರ, ಈ ಮಳೆಯ ತೀವ್ರತೆ ಮಧ್ಯಮ ಮಟ್ಟದಲ್ಲಿದ್ದು, ಮುಂದಿನ 3 ಗಂಟೆಗಳ ಈ ಮೂರು ಜಿಲ್ಲೆಗಳ ವಿವಿಧ ಭಾಗಗಯ ಮಳೆಯಾಗುವ ಸಾಧ್ಯತೆ ಇದೆ. ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹವಾಮಾನ ಇಲಾಖೆ ಸೂಚಿಸಿದೆ.
