Karwar| ಉತ್ತರಕನ್ನಡ ಜಿಲ್ಲೆಯಲ್ಲಿ ಹೊಸದಾಗಿ ಎರಡು ಮಂಗನ ಕಾಯಿಲೆ ಪ್ರಕರಣ ಪತ್ತೆಯಾಗಿದ್ದು, ಇದರಿಂದ ಇವರೆಗೆ ಜಿಲ್ಲೆಯಲ್ಲಿ ಪತ್ತೆಯಾದ ಪ್ರಕರಣ ಸಂಖ್ಯೆ ಒಟ್ಟು ಏಳಕ್ಕೆ ಏರಿಕೆಯಾದಂತಾಗಿದೆ.
ಉತ್ತರಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಹೊನ್ನಾವರದಲ್ಲಿ ಒಂದು, ಸಿದ್ದಾಪುರದಲ್ಲಿ ಮೂರು ಹಾಗೂ ಶಿರಸಿಯಲ್ಲಿ ಒಂದು ಪ್ರಕರಣ ಸೇರಿದಂತೆ ಒಟ್ಟು ಐದು ಮಂಗನಕಾಯಿಲೆ ಪ್ರಕರಣ ಪತ್ತೆಯಾಗಿತ್ತು. ಈ ಎಲ್ಲಾ ಐವರು ಸೂಕ್ತ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ಹಿಂತಿರುಗಿದ್ದಾರೆ.
ಈಗ ಸಿದ್ದಾಪುರದ ಇಬ್ಬರಲ್ಲಿ ಮಂಗನಕಾಯಿಲೆ ಪತ್ತೆಯಾಗಿದ್ದು, ಅವರನ್ನು ಸೂಕ್ತ ಚಿಕಿತ್ಸೆಗಾಗಿ ಕೆಎಂಸಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೆಡಿಕಲ್ ಆಫೀಸರ್ ಡಾ.ಸತೀಶ ಶೇಟ್ ಮಾಹಿತಿ ನೀಡಿದ್ದಾರೆ.
