Karwar| ಅರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ತಿಳಿಸಿದರು.
ಭಾರತೀಯ ಜನತಾ ಪಕ್ಷ ಕಾರವಾರ ನಗರ ಮಂಡಲ ಹಾಗೂ ಗ್ರಾಮೀಣ ಮಂಡಲ ವತಿಯಿಂದ ನಗರದ ಬಿಜೆಪಿ ಕಾರ್ಯಾಲಯದಲ್ಲಿ ಮಂಗಳವಾರ ನಡೆದ ವಿಶೇಷ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿಎಲ್ ಎ -2 ಅವರ ಕಾರ್ಯ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಅವರು ವಿವರವಾದ ಮಾಹಿತಿ ನೀಡಿದರು.
ಸಭೆಯಲ್ಲಿ ನಗರ ಮಂಡಲ ಅಧ್ಯಕ್ಷ ನಾಗೇಶ್ ಕುರುಡೇಕರ್, ಗ್ರಾಮೀಣ ಮಂಡಲ ಅಧ್ಯಕ್ಷ ಸುಭಾಷ್ ಗುನಗಿ, ಜಿಲ್ಲಾ ಉಪಾಧ್ಯಕ್ಷ ಸಂಜಯ್ ಸಾಳುಂಕೆ, ಮಾಧ್ಯಮ ಸಹ ಸಂಚಾಲಕ ಕಿಶನ್ ಕಾಂಬಳೆ, ನಗರ ಸಭೆಯ ಮಾಜಿ ಅಧ್ಯಕ್ಷ ರವಿರಾಜ್ ಅಂಕೋಲೆಕರ್, ನಗರ ಹಾಗೂ ಗ್ರಾಮೀಣ ಪ್ರಧಾನ ಕಾರ್ಯದರ್ಶಿಗಳು, ಬಿಜೆಪಿ ಮುಖಂಡರು, ಪ್ರಮುಖರು, ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಮಹಾಶಕ್ತಿ ಹಾಗೂ ಶಕ್ತಿಕೇಂದ್ರ ಅಧ್ಯಕ್ಷರು, ಪ್ರಭಾರಿಗಳು, ಎಲ್ಲಾ ಮೋರ್ಚಾದವರು, ಪ್ರಕೋಷ್ಟದವರು, ಬೂತ್ ಅಧ್ಯಕ್ಷರು, ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
