ಕಾರ್ಮಿಕರ ಆರೋಗ್ಯ ಮತ್ತು ಸುರಕ್ಷತಾ ದೃಷ್ಠಿಯಿಂದ ಸರ್ಕಾರ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿ ವತಿಯಿಂದ ಪಿಂಚಣಿ ಸೌಲಭ್ಯ, ಟೂಲ್ ಕಿಟ್ ಸೌಲಭ್ಯ, ಶೈಕ್ಷಣಿಕ ಸಹಾಯಧನ, ಕುಟುಂಬ ಪಿಂಚಣಿ ಸೌಲಭ್ಯ, ಹೆರಿಗೆ ಸೌಲಭ್ಯ, ವೈದ್ಯಕೀಯ ಸಹಾಯಧನ, ಅಪಘಾತ ಪರಿಹಾರ, ದುರ್ಬಲತೆ ಪಿಂಚಣಿ, ಅಂತ್ಯಕ್ರಿಯೆ ವೆಚ್ಚ, ತಾಯಿ ಮಗು ಸಹಾಯ ಹಸ್ತ, ಪ್ರಮುಖ ವೈದ್ಯಕೀಯ ಸಹಾಯಧನ ಹಾಗೂ ಇತರೆ ಸೌಲಭ್ಯಗಳನ್ನು ಸರ್ಕಾರ ನೀಡುತ್ತಿದ್ದು ಇದರ ಪ್ರಯೋಜ ಪಡೆಯಬೇಕು.

ಕಾರವಾರ: ದಿನ ನಿತ್ಯ ಬದುಕಿನ ಭಾಗವಾಗಿ ದುಡಿಯುತ್ತಿರುವ ಕಾರ್ಮಿಕರ ಅನುಕೂಲಕ್ಕಾಗಿ ಸರ್ಕಾರ ಅನೇಕ ಯೋಜನೆಗಳು ಮತ್ತು ಸೌಲಭ್ಯಗಳನ್ನು ನೀಡುತ್ತಿದ್ದು, ಕಾರ್ಮಿಕರು ಇದರ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಏಜೆನ್ಸಿ ಲಿಮಿಟೆಡ್ ಅಧ್ಯಕ್ಷ ಸತೀಶ್ ಕೃಷ್ಣ ಸೈಲ್ ಹೇಳಿದರು.

ಅವರು ಕಾರವಾರದ ಜಿಲ್ಲಾ ಪೊಲೀಸ್ ಕಲ್ಯಾಣ ಮಂಟಪದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಆಯೋಜಿಸಲಾದ ಅರ್ಹ ಕಟ್ಟಡ ಕಾರ್ಮಿಕರಿಗೆ ಸುರಕ್ಷತಾ ಕಿಟ್ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕಾರವಾರ ತಾಲೂಕಿನಲ್ಲಿ ಇದುವರೆಗೆ 7,782 ಕಟ್ಟಡ ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದು, ಇಂದು 350 ಕಾರ್ಮಿಕ ಫಲಾನುಭವಿಗಳಿಗೆ ಸುರಕ್ಷಿತಾ ಕಿಟ್ ವಿತರಿಸಲಾಗಿದೆ. ಕಾರ್ಮಿಕರು ಈ ಸೌಲಭ್ಯದಿಂದ ಯಾರು ಕೂಡ ವಂಚಿತರಾಗದೇ 18 ವರ್ಷದಿಂದ 60 ವರ್ಷದೊಳಗಿನ ಕಾರ್ಮಿಕರು ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಕೊಂಡು ಸರ್ಕಾರ ನೀಡುವ ಸೌಲಭ್ಯಗಳನ್ನು ಪಡೆದುಕೊಳ್ಳಿ ಎಂದರು.

ಕಾರವಾರ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ವೀರನಗೌಡ ಏನಗಗೌಡರ, ಕಾರ್ಮಿಕ ಇಲಾಖೆ ಅಧಿಕಾರಿಗಳಾದ ಲಲಿತಾ ಸಾತೇನಳ್ಳಿ, ವೆಂಕಟೇಶ್ ಬಾಬು, ಕಾರ್ಮಿಕ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.