Sirsi| ಶಿರಸಿಯ ಮಾರಿಕಾಂಬಾ ದೇವಸ್ಥಾನದ ಎದುರು ನೂತನವಾಗಿ ನಿರ್ಮಿಸಿದ ‘ಪೊಲೀಸ್ ಸಹಾಯ ಘಟಕ’ ವನ್ನು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ಟಿ. ನಾಯ್ಕ್‌ ಶುಕ್ರವಾರ ಉದ್ಘಾಟಿಸಿದರು.

ರಾಜ್ಯದ ಶಕ್ತಿ ಪೀಠಗಳಲ್ಲೊಂದಾದ ಶಿರಸಿ ಮಾರಿಕಾಂಬೆಯ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ವಾಹನ ಹಾಗೂ ಜನದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಭಕ್ತರಿಗೆ ಸೂಕ್ತ ಮಾಹಿತಿ ಸೇರಿದಂತೆ ತುರ್ತು  ದೃಷ್ಟಿಯಿಂದ ಹಲವು ದಿನಗಳಿಂದ ಪೋಲಿಸ್ ಸಹಾಯ ಘಟಕಕ್ಕೆ ತೀವ್ರ ಒತ್ತಾಯ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಪೋಲಿಸ್ ಇಲಾಖೆಯಿಂದ ಪೋಲಿಸ್ ಸಹಾಯ ಘಟಕ ಆರಂಭಿಸಲಾಗಿದೆ.

ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು, ದೇವಸ್ಥಾನದ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.