ಹೊನ್ನಾವರ ತಾಲೂಕಿನ ಮಂಕಿ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾದ ಇಂದಿರಾ ಕ್ಯಾಂಟಿನ್ ನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಭಾನುವಾರ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲಾ ಮುನ್ಸಿಪಾಲಿಟಿ, ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಗಳ ವ್ಯಾಪ್ತಿಯಲ್ಲಿ ಇಂದಿರಾ ಕ್ಯಾಂಟಿನ್ ನ್ನು ಪ್ರಾರಂಭಿಸಲಾಗಿದೆ. ಇದರ ಉದ್ದೇಶ ಬಡವರಿಗೆ, ಹಸಿದವರಿಗೆ ಗುಣ ಮಟ್ಟದ ಶುಚಿ ಮತ್ತು ರುಚಿಯಾದ ಪೌಷ್ಟಿಕ ಆಹಾರವನ್ನು ಕೈಗೆಟುಕುವ ದರದಲ್ಲಿ ಒದಗಿಸುವುದಾಗಿದ್ದು, ಈ ಇಂದಿರಾ ಕ್ಯಾಂಟಿನ್ ನ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದರು
ಈ ಸಂದರ್ಭದಲ್ಲಿ ಹೊನ್ನಾವರ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಣ್ಣಪ್ಪ ಮಾಬ್ಲೇಶ್ವರ ನಾಯ್ಕ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಹೀರ ಅಬ್ಬಾಸ್ ಎಸ್, ಮಂಕಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಕೇಶವ ಚೌಗುಲೆ, ಮಂಕಿ ಪಟ್ಟಣ ಪಂಚಾಯತ ಸದಸ್ಯರು, ಸಿಬ್ಬಂದಿಗಳು, ಸಾರ್ವಜನಿಕರು ಮತ್ತಿತರರು ಇದ್ದರು.
ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆವತಿಯಿಂದ 2024-25 ಸಾಲಿನ ಪಶ್ಚಿಮವಾಹಿನಿ ಯೋಜನೆಯಡಿ 19.98 ಕೋಟಿ ರೂ ವೆಚ್ಚದಲ್ಲಿ ಮಂಜೂರಾಗಿರುವ ಹೊನ್ನಾವರ ತಾಲೂಕಿನ ಮಂಕಿ ಹೊಸಹಿತ್ಲು ಸೇತುವೆಯಿಂದ ಬೋಳೆಬಸ್ತಿ ಸೇತುವೆವರೆಗೆ ದೊಡ್ಡ ಹೊಳೆ ಬಲದಂಡೆಗೆ ಮತ್ತು
ಎಡದಂಡೆಗೆ ಖಾರ್ಲ್ಯಾಂಡ್ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಭಾನುವಾರ ನೆರವೇರಿಸಿದರು.
ಈ ಸಂದರ್ಭದಲ್ಲಿ ಹೊನ್ನಾವರ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಣ್ಣಪ್ಪ ನಾಯ್ಕ, ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರ್ ಪ್ರಶಾಂತ್, ಗ್ರಾಮ ಪಂಚಾಯತ್ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.
