Haliyal: ತಾಲೂಕಿನ ಕೆಸರೊಳ್ಳಿ ಕ್ರಾಸ್ ಸಮೀಪ ಪಾಟೀಲ್ ಪೆಟ್ರೋಲ್ ಬಂಕ್ ಬಳಿ ಸ್ಕೂಟಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರಿನ ವಿದ್ಯಾರ್ಥಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಬೆಂಗಳೂರಿನ ಜಾಕ್ರಿ ಗಾರ್ಡನ್ ನಿವಾಸಿ ಮೊಹ್ಮಮದ ಜೀಲಾನ ಅಬ್ದುಲ ವಾಜಿದ (21) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಸ್ಕೂಟಿ ಸವಾರ ಮೊಹಮದ್ ರಹೀಂ (22) ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೆಸರೊಳ್ಳಿ ಕ್ರಾಸ್ ಮುಂದಿರುವ ಪಾಟೀಲ್ ಪೆಟ್ರೋಲ್ ಬಂಕ್ ಬಳಿ ಎದುರಿಗಿದ್ದ ಲಾರಿಯನ್ನು ಓವರ್ ಟೆಕ್ ಯತ್ನಿಸಿದ್ದಾನೆ ಅತಿವೇಗದಲ್ಲಿ ಸಾಗುತ್ತಿದ್ದ ಸ್ಕೂಟಿ ಲಾರಿಯ ಹಿಂಬದಿ ಚಕ್ರದ ಮಡ್ಗಾರ್ಡ್ಗೆ ತಾಗಿದ ಪರಿಣಾಮ ನಿಯಂತ್ರಣ ತಪ್ಪಿ ರಸ್ತೆ ಮೇಲೆ ಬಿದ್ದಿದೆ. ಅಪಘಾತದ ತೀವ್ರತೆಗೆ ಸ್ಕೂಟಿಯ ಹಿಂಬದಿ ಸವಾರ ಮೊಹ್ಮಮದ ಜೀಲಾನ ಅವರಿಗೆ ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಕೂಟಿ ಸವಾರ ಮೊಹಮದ್ ರಹೀಂ ಅವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಕುರಿತು ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
