Karwar| ಉತ್ತರ ಕನ್ನಡ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಮೇ 17 ಮತ್ತು18 ರ ವರೆಗೆ ಎರಡು ದಿನಗಳ ಕಾಲ ಭಾರಿ ಗಾಳಿ ಹಾಗೂ ಮಿಂಚು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಹಿನ್ನೆಲೆಯಲ್ಲಿ ಸಾರ್ವಜನಿಕರು, ಮೀನುಗಾರರು ಹಾಗೂ ಪ್ರವಾಸಿಗರಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಕೆಲ ಸೂಚನೆಗಳನ್ನು ಬಿಡುಗಡೆ ಮಾಡಿದೆ.

ಸಮುದ್ರದಲ್ಲಿ ಅಲೆಗಳು ತೀವ್ರತೆ ಇರುವುದರಿಂದ ಮೀನುಗಾರರು ಮೀನುಗಾರಿಕೆ ತೆರಳದಂತೆ ಹಾಗೂ
ಪ್ರವಾಸಿಗರು, ಸಾರ್ವಜನಿಕರು ನದಿ ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಲು ಸೂಚಿಸಿದೆ.

ಮಳೆಯ ಜೊತೆಗೆ ಗಾಳಿ ಕೂಡಾ 40-60 ಕಿ.ಮೀ ವೇಗದಿಂದ ಬೀಸುವ ಸಾಧ್ಯತೆಯಿರುವುದರಿಂದ ಅಪಾಯಕಾರಿ ಮರಗಳಿರುವ ಮನೆಗಳಲ್ಲಿಯ ಜನರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವುದು ಮತ್ತು ಮರಗಳ ಕೆಳಗೆ ಆಶ್ರಯ ಪಡೆಯದಂತೆ ಸೂಚಿಸಲಾಗಿದೆ. ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆವಹಿಸಲು ತಿಳಿಸಿದೆ.

ತುರ್ತು ಸೇವೆಗೆ 24*7 ಕಂಟ್ರೋಲ್ ರೂಮ್ ಸಂಖ್ಯೆ 08382-229857 ಮೊಬೈಲ್ ಸಂಖ್ಯೆ 9483511015 ನ್ನು ಸಂಪರ್ಕಿಸುವಂತೆ ಉತ್ತರಕನ್ನಡ ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ತಿಳಿಸಿದ್ದಾರೆ.