Bhaktal | ಬಕ್ರೀದ್ ಹಬ್ಬದ ಹಿನ್ನೆಲೆ ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಭಟ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಮತ್ತು ಸಾಗಾಟವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.
ಈ ಬಗ್ಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ಅವರು ಆದೇಶ ಹೊರಡಿಸಿದ್ದು, ಮೇ 28ರಂದು ಬೆಳಿಗ್ಗೆ 5 ಗಂಟೆಯಿಂದ ಮೇ 29ರ ಮಧ್ಯರಾತ್ರಿ 12 ಗಂಟೆಯವರೆಗೆ ಎಲ್ಲಾ ವಿಧದ ಮದ್ಯ ಮಾರಾಟ ಹಾಗೂ ಸಾಗಾಟಕ್ಕೆ ನಿರ್ಬಂಧ ಹೇರಲಾಗಿದೆ. ಈ ಅವಧಿಯಲ್ಲಿ ಭಟ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಎಲ್ಲಾ ಮದ್ಯದಂಗಡಿಗಳನ್ನು ಬಂದ್ ಮಾಡುವಂತೆ ಸೂಚನೆ ನೀಡಲಾಗಿದೆ. ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಆದೇಶಕ್ಕೆ ಸಹಕರಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
