Karwar| ಭಟ್ಕಳದ ಮುರುವಿನಕಟ್ಟೆಯ ಬಗ್ಗೆ ಸುಳ್ಳು ಹಾಗೂ ತಪ್ಪು ಮಾಹಿತಿಯನ್ನು ಸಾಮಾಜಿಕ ಜಾಲತಾಣದ ಮೂಲಕ ಪೋಸ್ಟ್ ಮಾಡಿದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ ಎಚ್ಚರಿಕೆ ನೀಡಿದ್ದಾರೆ.
ಭಟ್ಕಳದ ರಾ.ಹೆ-66 ರ ಅಗಲೀಕರಣದ ಸಮಯದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ಹಾಗೆ ಅಮ್ಮನವರ ಹೊರೆಯನ್ನಿಡುವ ಮುರುವಿನಕಟ್ಟೆಯನ್ನು NHAI ರವರಿಂದ ROW ವ್ಯಾಪ್ತಿಯಲ್ಲಿ ಲಭ್ಯ ಸರ್ಕಾರಿ ಜಮೀನಿನಲ್ಲಿ ದಿ: 24.5.2026 ರಂದು ಕೆಂಪು ಕಲ್ಲಿನಿಂದ ಕಟ್ಟಲಾಗುತ್ತಿರುವ ಸಂರಚನೆಯನ್ನು ಯಾರೋ ಕಿಡಿಗೇಡಿಗಳು ನಾಶಪಡಿಸಿದ್ದಾರೆ. ದುಷ್ಕರ್ಮಿಗಳ ಮೇಲೆ ಕಾನೂನು ಕ್ರಮ ಜರುಗಿಸಲಾಗುತ್ತಿದೆ. ಸಾಂಪ್ರದಾಯಿಕವಾಗಿ ಅಮ್ಮನವರ ಹೊರೆಯನ್ನಿಡಲಾಗುತ್ತಿರುವ ಮೂಲ ಕಟ್ಟೆಯಿರುವ ಮುರುವಿನಕಟ್ಟೆ ಸ್ಥಳವು ಯಥಾಸ್ಥಿತಿಯಲ್ಲಿದೆ.
ಆದರೆ ಕೆಲ ಸಮಾಜಘಾತುಕ ಶಕ್ತಿಗಳು ಸಾಮಾಜಿಕ ಜಾಲತಾಣಗಳಲ್ಲಿ ತಪ್ಪಾದ ಹಾಗೂ ಸುಳ್ಳು ಮಾಹಿತಿಯನ್ನು ಹರಿಬಿಟ್ಟು ಮೂಲ ಮುರುವಿನಕಟ್ಟೆಗೆ ಧಕ್ಕೆಯಾಗಿರುವ ರೀತಿಯಲ್ಲಿ ಪ್ರಚಾರ ಮಾಡಲಾಗುತ್ತಿದೆ. ಸಾರ್ವಜನಿಕರು ಇಂತಹ ಸುದ್ದಿಗಳನ್ನ ನಂಬಬಾರದು. ಸಾಂಪ್ರದಾಯಿಕವಾಗಿ ಅಮ್ಮನವರ ಹೊರೆಯನ್ನಿಡುವ ಮೂಲ ಸ್ಥಳ ಮುರುವಿನಕಟ್ಟೆಯು ಯಥಾಸ್ಥಿತಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
