Karwar| ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಭಟ್ಕಳ ತಾಲ್ಲೂಕಿನಾದ್ಯಂತ ತಾತ್ಕಾಲಿಕವಾಗಿ ಮದ್ಯ ನಿಷೇಧ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದಾರೆ.

ಆದೇಶದಂತೆ, ಇಂದು ಮೇ 28ರ ಮಧ್ಯರಾತ್ರಿ 12 ಗಂಟೆಯಿಂದ ಮೇ 30ರ ಬೆಳಗ್ಗೆ 6 ಗಂಟೆಯವರೆಗೆ ತಾಲ್ಲೂಕಿನ ವ್ಯಾಪ್ತಿಯಲ್ಲಿರುವ ಎಲ್ಲಾ ರೀತಿಯ ಮದ್ಯದ ಅಂಗಡಿಗಳನ್ನು ಬಂದ್ ಮಾಡಲಾಗುತ್ತದೆ. ಈ ಅವಧಿಯಲ್ಲಿ ಮದ್ಯ ಮಾರಾಟ, ಸಾಗಾಟ ಹಾಗೂ ವಿತರಣೆ ಸಂಪೂರ್ಣ ನಿಷೇಧಿಸಲಾಗಿದೆ. ಸಾರ್ವಜನಿಕರು ನಿಯಮಗಳನ್ನು ಪಾಲಿಸಿ ಸಹಕರಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.