Karwar| ನಾಳೆ ಶುಕ್ರವಾರ ಮೇ.29 ಕ್ಕೆ ಭಟ್ಕಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಭೇಟಿ ನೀಡಲಿದ್ದಾರೆ.

ಬೆಳಗ್ಗೆ 10ಕ್ಕೆ ಅವರು ಭಾನುವಾರ ಚಿಪ್ಪಿಕಲ್ಲು ತೆಗೆಯುವಾಗ ಉಂಟಾದ ದುರಂತದಲ್ಲಿ ಮೃತರಾದ ಸಂತ್ರಸ್ತ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಲಿದ್ದಾರೆ. ನಂತರ ಹಿಂದುಗಳ ಧಾರ್ಮಿಕ ನಂಬಿಕೆಯ ಮುರಿನಕಟ್ಟೆ ಧ್ವಂಸವನ್ನು ವಿರೋಧಿಸಿ ನಡೆಯುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.