Ankola| ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಕಂಚಿನಬಾಗಿಲು ರಾಷ್ಟ್ರೀಯ ಹೆದ್ದಾರಿ-52 ರಲ್ಲಿ ಪಲ್ಟಿಯಾಗಿ ಓರ್ವ ಸಾವನ್ನಪ್ಪಿ, ಇಪ್ಪತ್ತು ಜನ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಆಂಧ್ರಪ್ರದೇಶದ ಮೂಲದ ಪ್ರಯಾಣಿಕ ಶರಣಯ್ಯ (42) ಎಂಬಾತನೇ ಮೃತ ವ್ಯಕ್ತಿ. ಸೀಬರ್ಡ್ ಸಂಸ್ಥೆಯ ಬಸ್ ಬಳ್ಳಾರಿಯಿಂದ ಗೋವಾಕ್ಕೆ ತೆರಳುತ್ತಿದ್ದಾಗ ಶನಿವಾರ ನಸುಕಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಅಂಕೋಲಾ-ಯಲ್ಲಾಪುರ ಹೆದ್ದಾರಿ, ಕಂಚಿನಬಾಗಿಲ ಬಳಿ ಬಸ್ ಪಲ್ಟಿಯಾಗಿದೆ.
ಬಸ್ ನಲ್ಲಿ ಸುಮಾರು 36 ಜನ ಪ್ರಯಾಣಿಸುತ್ತಿದ್ದರು.ಅದರಲ್ಲಿ ಇಪ್ಪತ್ತು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಅಂಕೋಲಾ ಹಾಗೂ ಕಾರವಾರದ ಕ್ರಿಮ್ಸ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ನಂತರ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಎರಡೂ ಬದಿಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದು, ಪೋಲಿಸರು ಸ್ಥಳಕ್ಕೆ ಆಗಮಿಸಿದ್ದಾರೆ.
