Chikkamagaluru| ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವ ಗಜೇಂದ್ರಸಿಂಗ್ ಶೇಖಾವತ್ ಅವರು ಗುರುವಾರ ಶೃಂಗೇರಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಶೃಂಗೇರಿಯ ಶಾರದಾಂಬಾ ಹಾಗೂ ತೋರಣ ಗಣಪತಿ ದೇವಸ್ಥಾನಗಳಿಗೆ ಭೇಟಿ ನೀಡಿದ ಸಚಿವರು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಶೃಂಗೇರಿ ಜಗದ್ಗುರುಗಳಾದ ಭಾರತೀ ತೀರ್ಥ ಮಹಾಸ್ವಾಮಿಗಳನ್ನು ಹಾಗು ವಿಧುಶೇಖರ ಭಾರತೀ ಸ್ವಾಮಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಶೇಖಾವತ್ ಅವರು, ಶೃಂಗೇರಿ ಪೀಠವು ಲಕ್ಷಾಂತರ ಭಕ್ತರಿಗೆ ಅಧ್ಯಾತ್ಮಿಕ ಶಕ್ತಿ ಮತ್ತು ಪ್ರೇರಣೆಯನ್ನು ನೀಡುತ್ತಿರುವ ಮಹತ್ವದ ಧಾರ್ಮಿಕ ಕೇಂದ್ರವಾಗಿದೆ. ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಶ್ರೀ ಮಠವು ದೇಶಾದ್ಯಂತ ಅನೇಕ ಸೇವಾ ಕಾರ್ಯಗಳನ್ನು ನಡೆಸುತ್ತಿದ್ದು, ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮಿಕ ಪರಂಪರೆಯ ಉಳಿವಿಗೆ ಮಹತ್ತರ ಕೊಡುಗೆ ನೀಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಭೇಟಿಯ ವೇಳೆ ಶ್ರೀ ಮಠದ ಆಡಳಿತ ಮಂಡಳಿಯ ಸದಸ್ಯರು ಹಾಗೂ ಭಕ್ತರು ಉಪಸ್ಥಿತರಿದ್ದರು.
