ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ ಕಾರು, ಬುಲೆರೋ ಹಾಗೂ ಬೈಕ್ ಒಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು ಏಳು ಜನ ಗಂಭೀರ ಗಾಯಗೊಂಡ ಘಟನೆ ಜಿಲ್ಲೆಯ ಜೊಯಿಡಾ ತಾಲೂಕಿನ ಜಗಲಬೆಟ್ ಬಳಿ ನಡೆದಿದೆ.

ಅಪಘತದಲ್ಲಿ ಟಿಪ್ಪರ್ ಚಾಲಕ ಕುಮಟಾ ಮೂಲದ ಬಾಬು ಸ್ಥಳದಲ್ಲೇ ಮೃತಪಟ್ಟಿದ್ದು ಗಂಭೀರವಾಗಿ ಗಾಯಗೊಂಡವರನ್ನು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಹಾಗೂ ಬೆಳಗಾವಿ ಆಸ್ಪತ್ರಗೆ ರವಾನಿಸಲಾಗಿದೆ.

ಅಪಘಾತದಿಂದ ಕೆಲಕಾಲ ರಸ್ತೆ ಸಂಚಾರ ಸ್ಥಗಿತವಾಗಿತ್ತು. ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.