Siddapur| ಪಟ್ಟಣದ ಹೊಸೂರು ಸರ್ಕಲ್ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಓಸಿ ಮಟ್ಕಾ ಜುಗಾರಾಟದ ಅಡ್ಡೆಯ ಮೇಲೆ ಪೋಲಿಸರು ದಾಳಿ ನಡೆಸಿ, ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಹೊಸೂರು ಗ್ರಾಮದ ಗೋಪಾಲ ನಾಗ ಮಡಿವಾಳ (50) ಎಂಬಾತನು ಜೂನ್ 20ರಂದು ಸಂಜೆ 4 ಗಂಟೆ ಸುಮಾರಿಗೆ ಹೊಸೂರು ಸರ್ಕಲ್ ಬಳಿ ರಸ್ತೆ ಬದಿಯಲ್ಲಿ ಸಾರ್ವಜನಿಕರಿಂದ ಹಣವನ್ನು ಪಂಥವಾಗಿ ಕಟ್ಟಿಸಿಕೊಂಡು ಓಸಿ ಮಟ್ಕಾ ಅಂಕೆ-ಸಂಖ್ಯೆಗಳ ಚೀಟಿ ಬರೆಯುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ.
ದಾಳಿ ವೇಳೆ ಆರೋಪಿತನಿಂದ ₹650 ನಗದು ಹಣ, ಓಸಿ ಮಟ್ಕಾ ಅಂಕೆ-ಸಂಖ್ಯೆ ಬರೆದ ಚೀಟಿ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಗುನ್ನಾ ನಂ.147/2026, ಕಲಂ 78(3) ಕೆ.ಪಿ. ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ. ಸಿದ್ದಾಪುರ ಪೊಲೀಸ್ ಠಾಣೆಯ ಉಪನಿರೀಕ್ಷಕ ನಾಗಪ್ಪ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.
