Bhatkal|ಕೆಲಸಕ್ಕೆಂದು ತೆರಳಿದ್ದ ಯುವತಿಯೊಬ್ಬಳು ಮನೆಗೆ ವಾಪಸ್ ಬಾರದೆ ನಾಪತ್ತೆಯಾಗಿರುವ ಘಟನೆ ಭಟ್ಕಳ ಪಟ್ಟಣದಲ್ಲಿ ನಡೆದಿದೆ. ಈ ಕುರಿತು ಭಟ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಾಪತ್ತೆಯಾದ ಯುವತಿಯನ್ನು ರುಬೀನಾ ಸಾಧಿಕ್ ಶೇಖ್ (19) ಎಂದು ಗುರುತಿಸಲಾಗಿದೆ. ಘಟನೆ ಕುರಿತು ರುಬೀನಾ ಅವರ ಸಹೋದರ ಸದ್ದಾಂ ಹುಸೇನ್ (31) ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ತಮ್ಮ ತಂಗಿ ಭಟ್ಕಳದ ಲೈಫ್ ಕೇರ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಳು. ಎಂದಿನಂತೆ ಜೂನ್ 11ರಂದು ಬೆಳಿಗ್ಗೆ 9 ಗಂಟೆಗೆ ತಂದೆ ಆಸ್ಪತ್ರೆಗೆ ಸಮೀಪ ಬಿಟ್ಟು ಬಂದಿದ್ದರು. ಬಳಿಕ ಆಕೆ ಆಸ್ಪತ್ರೆಯಿಂದ ಎಲ್ಲಿಗೋ ತೆರಳಿ ಕಾಣೆಯಾಗಿದ್ದಾಳೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಸಂಬಂಧಿಕರು ಹಾಗೂ ಪರಿಚಯಸ್ಥರ ಬಳಿ ಹುಡುಕಾಟ ನಡೆಸಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಯುವತಿಯನ್ನು ಹುಡುಕಿ ಕೊಡಬೇಕೆಂದು ಸಹೋದರ ಪೊಲೀಸರಿಗೆ ಮನವಿ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಭಟ್ಕಳ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
