Mundagod| ವಿದ್ಯುತ್ ಗುತ್ತಿಗೆದಾರರೊಬ್ಬರಿಂದ ₹65 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಮುಂಡಗೋಡ ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಲಂಚ ಸ್ವೀಕಾರದ ಆರೋಪದ ಮೇರೆಗೆ ಎಇಇ ಧರ್ಮರಾಜ ಬೆಡಸಗಾಂವ್ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ವಿದ್ಯುತ್ ಗುತ್ತಿಗೆದಾರ ಶಿವಯೋಗಿ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಕಾರವಾರ ಹಾಗೂ ಧಾರವಾಡ ಲೋಕಾಯುಕ್ತ ತಂಡಗಳು ಜಂಟಿ ಕಾರ್ಯಾಚರಣೆ ನಡೆಸಿದ್ದು, ಮುಂಡಗೋಡ ಹೆಸ್ಕಾಂ ಕಚೇರಿಯಲ್ಲಿ ದಾಳಿ ನಡೆಸಲಾಗಿದೆ.
ಬಿಸಿಎಂ ವಸತಿ ನಿಲಯ ಕಾಮಗಾರಿಗೆ ಸಂಬಂಧಿಸಿದಂತೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಕೇಳಿಬಂದಿದ್ದು, ಅದರಂತೆ ಹಣ ಸ್ವೀಕರಿಸುತ್ತಿದ್ದ ವೇಳೆ ಅಧಿಕಾರಿಗಳು ದಾಳಿ ನಡೆಸಿ ಎಇಇ ಅವರನ್ನು ರೆಡ್ ಹ್ಯಾಂಡ್ ಆಗಿ ಸೆರೆ ಹಿಡಿದಿದ್ದಾರೆ. ಸದ್ಯ ಲೋಕಾಯುಕ್ತ ಅಧಿಕಾರಿಗಳು ಕಚೇರಿಯಲ್ಲಿನ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.
