Haliyal| ಇಲ್ಲಿನ ಪೋಲಿಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ನ್ನು ಆರು ತಿಂಗಳವರೆಗೆ ಹಾಸನ ಜಿಲ್ಲೆಗೆ ಗಡಿಪಾರು ಮಾಡಲಾಗಿದೆ‌.

ಹಳಿಯಾಳದ ಸಿದ್ದರಾಮೇಶ್ವರ ಗಲ್ಲಿಯ ರೌಡಿಶೀಟರ್ ಮಂಜುನಾಥ ಹನುಮಂತ ಕೊಳಿಪುಚ್ಚ ಎಂಬಾತನನ್ನೆ ಉತ್ತರ ಕನ್ನಡ ಜಿಲ್ಲೆಯಿಂದ ಹಾಸನ ಜಿಲ್ಲೆಗೆ ಗಡಿಪಾರು ಮಾಡಿ ಆದೇಶಿಸಲಾಗಿದೆ.

ಮಂಜುನಾಥ ಕೊಳಿಪುಚ್ಚ ವಿರುದ್ಧ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, 2010ರಿಂದ 2026ರವರೆಗೆ ಒಟ್ಟು 10 ಅಪರಾಧ ಪ್ರಕರಣಗಳು ದಾಖಲಾಗಿವೆ. ಅವುಗಳಲ್ಲಿ 5 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು, 2 ಪ್ರಕರಣಗಳಲ್ಲಿ ಬಿಡುಗಡೆಗೊಂಡಿದ್ದು, 3 ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿವೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಈತನ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸುವ ಉದ್ದೇಶದಿಂದ ಹಳಿಯಾಳ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟ್ ತೆರೆಯಲಾಗಿದ್ದು, ಆತನ ಚಲನವಲನಗಳ ಮೇಲೆ ನಿಗಾ ಇಡಲಾಗಿತ್ತು. ಆದರೂ ಅಪರಾಧಿಕ ಚಟುವಟಿಕೆಗಳು ಮುಂದುವರಿದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರು, ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 55(ಎ) ಮತ್ತು 55(ಬಿ) ಅಡಿ ಮಂಜುನಾಥ ಕೊಳಿಪುಚ್ಚ ನನ್ನು 2026 ರ ಡಿಸೆಂಬರ್ 5ರವರೆಗೆ ಉತ್ತರ ಕನ್ನಡ ಜಿಲ್ಲೆಯಿಂದ ಹಾಸನ ಜಿಲ್ಲಾ ವ್ಯಾಪ್ತಿಗೆ ಗಡಿಪಾರು ಮಾಡಿ ಆದೇಶಿಸಿದ್ದಾರೆ.

ಆದೇಶದಂತೆ ಹಳಿಯಾಳ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ ಮಂಜುನಾಥ ಕೊಳಿಪುಚ್ಚನನ್ನು ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ಅಧಿಕಾರಿಗಳ ಮುಂದೆ ಹಾಜರುಪಡಿಸಿದ್ದಾರೆ.