Karwar| ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಪ್ರಕೃತಿ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಸಲುವಾಗಿ ಎಲ್ಲಾ ಜಿಲ್ಲೆಗಳಿಗೆ ತಾತ್ಕಾಲಿಕವಾಗಿ ಮೇಲುಸ್ತುವಾರಿ ಸಚಿವರನ್ನು ನೇಮಿಸಲಾಗಿದೆ. ಉತ್ತರಕನ್ನಡ‌ ಜಿಲೆಯ ಪ್ರಕೃತಿ ವಿಕೋಪದ ಮೇಲುಸ್ತುವಾರಿಯಾಗಿ ಸಚಿವ ಯು.ಟಿ.ಖಾದರ್ ಅವರನ್ನು ನೇಮಕ ಮಾಡಲಾಗಿದೆ.

ಡಾ.ಜಿ. ಪರಮೇಶ್ವರ ಅವರನ್ನು ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗೆ, ಕೆ.ಹೆಚ್. ಮುನಿಯಪ್ಪ ಅವರಿಗೆ ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಮತ್ತು ವಿಜಯನಗರ,  ರಾಮಲಿಂಗರೆಡ್ಡಿ ಅವರಿಗೆ ಬೆಂಗಳೂರು ದಕ್ಷಿಣ ಮತ್ತು ಮಂಡ್ಯ ಎಂ.ಬಿ.ಪಾಟೀಲ್ ವಿಜಯಪುರ ಮತ್ತು ಬಾಗಲಕೋಟೆ,  ಕೆ.ಜೆ. ಚಾರ್ಜ್ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ,  ಕೃಷ್ಣ ಭೈರೇಗೌಡ ಬೆಂಗಳೂರು ನಗರ ಮತ್ತು ಹಾಸನ, ಈಶ್ವರ ಖಂಡ್ರೆ ಬೀದ‌ರ್ ಮತ್ತು ಗದಗ,

 ಸತೀಶ್ ಜಾರಕಿಹೋಳಿ ಅವರಿಗೆ ಬೆಳಗಾವಿ, ಧಾರವಾಡ ಮತ್ತು ಹಾವೇರಿ,  ಪ್ರಿಯಾಂಕ್ ಖರ್ಗೆ ಅವರನ್ನು ಕಲಬುರ್ಗಿ ಮತ್ತು ಯಾದಗಿರಿ, ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರಿಗೆ ರಾಯಚೂರು ಮತ್ತು ಕೊಪ್ಪಳ, ಯು.ಟಿ.ಖಾದರ್ ಅವರಿಗೆ ಉಡುಪಿ, ಕೊಡಗು, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ,  ಭೈರತಿ ಸುರೇಶ್ ಕೋಲಾರ ಮತ್ತು ಚಿಕ್ಕಬಳ್ಳಾಪುರ ಹಾಗೂ ಡಾ.ಯತೀಂದ್ರ ಸಿದ್ಧರಾಮಯ್ಯ ಅವರಿಗೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಮುಂದಿನ ಆದೇಶವರೆಗೆ ಮೇಲುಸ್ತುವಾರಿ ಜವಾಬ್ದಾರಿ ನೀಡಲಾಗಿದೆ.