Karwar| ನಗರದಲ್ಲಿ ಭಾನುವಾರ ಸಂಜೆ ಬೀಸಿದ ಬಾರಿ ಗಾಳಿ ಸಹಿತ ಮಳೆಯಿಂದ ಡೌನ್ ಚರ್ಚ್ ಸಮೀಪ ನಿಲ್ಲಿಸಲಾಗಿದ್ದ ಕಾರಿನ ಮೇಲೆ ಮರ ಬಿದ್ದು ಹಾನಿಯಾಗಿದೆ.
ಭಾರಿ ಗಾಳಿ ಹಾಗೂ ಮಳೆಯ ಪರಿಣಾಮ, ಡೌನ್ ಚರ್ಚ್ ಬಳಿ ನಿಲ್ಲಿಸಿದ್ದ ಕಾರಿನ ಮೇಲೆ ಮರ ಬಿದ್ದ ಪರಿಣಾಮ ವಾಹನ ಜಖಂಗೊಂಡಿದೆ. ಅದೃಷ್ಟವಶಾತ್ ಘಟನೆ ಸಂಭವಿಸಿದ ವೇಳೆ ಕಾರಿನೊಳಗೆ ಯಾರೂ ಇರದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮರವನ್ನು ತೆರವುಗೊಳಿಸಿ ವಾಹನ ಸಂಚಾರ ಸುಗಮಗೊಳಿಸಿದರು. ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
