ಕಾರವಾರ: ಕಾರವಾರ ಉಪವಿಭಾಗ ವ್ಯಾಪ್ತಿಯ ನಂದನಗದ್ದಾ ಫೀಡರ್‌ನಲ್ಲಿ ಪರಿವರ್ತಕ ಅಳವಡಿಸುವ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 13ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಕಾಮಗಾರಿ ನಡೆಯುವ ಅವಧಿಯಲ್ಲಿ ನಂದನಗದ್ದಾ ಫೀಡರ್ ವ್ಯಾಪ್ತಿಯ ಗ್ರಾಹಕರು ಅಗತ್ಯ ಮುನ್ನೆಚ್ಚರಿಕೆ ವಹಿಸಿ, ಹೆಸ್ಕಾಂಗೆ ಸಹಕರಿಸುವಂತೆ ಕಾರ್ಯ ಮತ್ತು ಪಾಲನಾ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ), ಹೆಸ್ಕಾಂ, ಕಾರವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
