ಕಾರವಾರ: ಸಾಮಾನ್ಯವಾಗಿ ಮಳೆಗಾಲದಲ್ಲಿ ತಂಪಾದ ವಾತಾವರಣವಿರಬೇಕು. ಆದರೆ ಇದಕ್ಕೆ ತದ್ವಿರುದ್ಧವಾಗಿ ರಾಜ್ಯದ ಕೆಲವು ಭಾಗಗಳಲ್ಲಿ ಬಿಸಿ ಗಾಳಿ (Heat Wave) ಹಾಗೂ ತೀವ್ರ ಉಷ್ಣಾಂಶದ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.
ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಬಿಸಿ ಗಾಳಿ ಮತ್ತು ತೀವ್ರ ಉಷ್ಣ ಪರಿಸ್ಥಿತಿಯ ಸಂಭವ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಹವಾಮಾನ ಇಲಾಖೆಯು ಜನರು ಅನಗತ್ಯವಾಗಿ ಬಿಸಿಲಿನಲ್ಲಿ ಓಡಾಡುವುದನ್ನು ತಪ್ಪಿಸುವಂತೆ, ಸಾಕಷ್ಟು ನೀರು ಸೇವಿಸುವಂತೆ ಹಾಗೂ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ.
ಮಳೆಗಾಲದಲ್ಲಿಯೇ ಬಿಸಿ ಗಾಳಿ ಎಚ್ಚರಿಕೆ ನೀಡಿರುವುದು ಅಪರೂಪದ ಬೆಳವಣಿಗೆಯಾಗಿದೆ. ಸಾರ್ವಜನಿಕರು ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.
