Dandeli | 10 ಚಕ್ರದ ಲಾರಿಯೊಂದು ಯುವತಿಯ ಎಕ್ಟಿವಾ ಬೈಕ್ ಗೆ ಗುದ್ದಿದ ಪರಿಣಾಮ ಯುವತಿ ಗಂಭೀರವಾಗಿ ಗಾಯಗೊಂಡ ಘಟನೆ ದಾಂಡೇಲಿಯ ಸಿಂಗರ್ಗಾವ್ ಬಳಿ ನಡೆದಿದೆ.
ಸಿಂಗರ್ಗಾವ್ ನ ಜಗಲ್ಬೇಟ್ ಬಳಿ ಈ ಅಪಘಾತ ನಡೆದಿದೆ. ಕಿರಿದಾದ ರಸ್ತೆಯಲ್ಲಿ ಭಾರೀ ಗಾತ್ರದ ಲಾರಿ ಸಾಗಟ ನಡೆಯುತ್ತಿರುವ ನಿನ್ನೆಲೆಯಲ್ಲಿ ಈ ಸ್ಥಳದಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇನ್ಮು ಅಪಘಾತದಲ್ಲಿ ಗಾಯಗೊಂಡ ಯುವತಿಗೆ ದಾಂಡೇಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ
ಪೊಲೀಸ್ ಇಲಾಖೆ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಈ ಮಾರ್ಗದಲ್ಲಿ ನಿಯಮ ಉಲ್ಲಂಘಿಸಿ ಸಂಚರಿಸುವ ಭಾರೀ ವಾಹನಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
