ದಾಂಡೇಲಿ: ನಗರದ ಅಂಬೇವಾಡಿ ಪ್ರದೇಶದಲ್ಲಿರುವ ಜಿ-2 ಪ್ಲಸ್ ವಸತಿ ಯೋಜನೆಯ ಹೊರಭಾಗದಲ್ಲಿ ಅಳವಡಿಸಲಾಗಿದ್ದ 65 ನೀರು ಸರಬರಾಜು ಮೀಟರ್‌ಗಳನ್ನು ಕಳ್ಳರು ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಈ ಕುರಿತು ಸುಪ್ರದಾ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮ್ಯಾನೇಜರ್ ಆನಂದ ವಾಮನ ದೀಕ್ಷಿತ (54) ಅವರು ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಪ್ರಕಾರ, ಜುಲೈ 10ರ ಸಂಜೆ 6 ಗಂಟೆಯಿಂದ ಜುಲೈ 12ರ ಬೆಳಿಗ್ಗೆ 11 ಗಂಟೆಯ ನಡುವಿನ ಅವಧಿಯಲ್ಲಿ ದುಷ್ಕರ್ಮಿಗಳು ಒಟ್ಟು ₹4,22,500 ಮೌಲ್ಯದ 65 ವಾಟರ್ ಮೀಟರ್‌ಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ.
ಸಂಸ್ಥೆಯ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿದ ಬಳಿಕ ಠಾಣೆಗೆ ಬಂದು ದೂರು ದಾಖಲಿಸಿದ್ದರಿಂದ ದೂರು ನೀಡಲು ವಿಳಂಬವಾಗಿದೆ ಎಂದು ಫಿರ್ಯಾದಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ಗುನ್ನಾ ಸಂಖ್ಯೆ 104/2026ರಡಿ ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 303(2) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
