ಕಾರವಾರ: ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರವು ಉತ್ತರ ಕನ್ನಡ ಜಿಲ್ಲೆಗೆ ಗುಡುಗು ಸಹಿತ ಮಳೆಯ ಮುನ್ನೆಚ್ಚರಿಕೆ ನೀಡಿದೆ.

ಇಂದು (ಜುಲೈ 16) ಸಂಜೆ 5.14ರಿಂದ ರಾತ್ರಿ 8.14ರವರೆಗೆ ಉತ್ತರ ಕನ್ನಡ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಹಾಗೂ ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಎಚ್ಚರಿಕೆ ಬಾಗಲಕೋಟೆ, ಬೆಳಗಾವಿ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ವಿಜಯಪುರ ಜಿಲ್ಲೆಗಳಿಗೂ ಸಹ ಅನ್ವಯಿಸುತ್ತದೆ.

ಗುಡುಗು-ಮಿಂಚಿನ ಸಂದರ್ಭ ಸಾರ್ವಜನಿಕರು ಅನಗತ್ಯವಾಗಿ ಹೊರಗಡೆ ಓಡಾಡುವುದನ್ನು ತಪ್ಪಿಸಬೇಕು. ಮರಗಳ ಕೆಳಗೆ ಆಶ್ರಯ ಪಡೆಯಬಾರದು ಹಾಗೂ ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಹವಾಮಾನ ಇಲಾಖೆ ಸಾರ್ವಜನಿಕರಿಗೆ ಸಲಹೆ ನೀಡಿದೆ.