ಅಂಕೋಲಾ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಇಂದು ಜುಲೈ 17 (ಶುಕ್ರವಾರ) ಅಂಕೋಲಾ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಈ ಕುರಿತು ತಹಸೀಲ್ದಾರ್ ಮಾಹಿತಿ ನೀಡಿದ್ದು, ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ. ಪಾಲಕರು ಹಾಗೂ ಸಾರ್ವಜನಿಕರು ಹವಾಮಾನ ಇಲಾಖೆಯ ಎಚ್ಚರಿಕೆಗಳನ್ನು ಗಮನಿಸಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಆಡಳಿತ ಮನವಿ ಮಾಡಿದೆ.
