ಮಹಾರಾಷ್ಟ್ರ: Ncp ನಾಯಕ ಹಾಗೂ ಮಹಾರಾಷ್ಟ್ರದ(Maharashtra) ಉಪಮುಖ್ಯಮಂತ್ರಿ ಅಜಿತ್ ಪವಾರ್ (೬೬) ಅವರು ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ.

ಜಿಲ್ಲಾ ಪರಿಷತ್ ಚುನಾವಣೆಯ ಪ್ರಚಾರ ಸಭೆಗಳು ಬಾರಾಮತಿಯಲ್ಲಿ ನಡೆಯುತ್ತಿದ್ದು, ಹೀಗಾಗಿ Ajith pawar ಬುಧವಾರ ಬೆಳಿಗ್ಗೆ ಮುಂಬೈನಿoದ ವಿಶೇಷ ವಿಮಾನದಲ್ಲಿ ಬಾರಾಮತಿಗೆ ತೆರಳುತ್ತಿದ್ದರು. ವಿಮಾನವು ನಿಲ್ದಾಣದ ರನ್ವೇಯಲ್ಲಿ ಇಳಿಯುತ್ತಿದ್ದಾಗ, ಹಠಾತ್ ತಾಂತ್ರಿಕ ದೋಷ ಸಂಭವಿಸಿದೆ. ಪೈಲಟ್ ನಿಯಂತ್ರಣ ಕಳೆದುಕೊಂಡು ವಿಮಾನ ಅಪಘಾತಕ್ಕೀಡಾಯಿತು ಎಂದು ತಿಳಿದುಬಂದಿದೆ.

ಪ್ರಾಥಮಿಕ ವರದಿಗಳ ಪ್ರಕಾರ, ಅಜಿತ್ ಪವಾರ್ ಸೇರಿದಂತೆ ವೀಮಾನದಲ್ಲಿದ್ದ ಆರು ಮಂದಿ ಪ್ರಯಾಣಿಕರು ಈ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದ ಮೂಲಗಳು ದೃಢಪಡಿಸಿವೆ.
ವಿಮಾನ ಅಪಘಾತಕ್ಕೆ ನಿಖರವಾದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಇದು ತಾಂತ್ರಿಕ ದೋಷವೋ ಅಥವಾ ಬೇರೆ ಯಾವುದಾದರೂ ಕಾರಣವೋ ಎಂದು ತನಿಖೆ ಮಾಡಲು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಉನ್ನತ ಮಟ್ಟದ ತನಿಖೆ ನಡೆಸುವ ಸಾಧ್ಯತೆಯಿದೆ.

ಮಹಾರಾಷ್ಟ್ರ Dcm ಅಜಿತ್ ಪವಾರ್ ಮತ್ತೆ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟಕ್ಕೆ ಮರಳಲಿದ್ದಾರೆ ಮತ್ತು Ncp ಯ ಎರಡೂ ಬಣಗಳು ಒಂದಾಗಲಿವೆ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್ ಕೆಲ ದಿನಗಳ ಹಿಂದೆ ಭವಿಷ್ಯ ನುಡಿದಿದ್ದರು. ಮುಂಬರುವ ಸ್ಥಳೀಯ ಚುನಾವಣೆಗಳಲ್ಲಿ ಉಭಯ ಬಣಗಳು ‘ಗಡಿಯಾರ’ ಚಿಹ್ನೆಯಡಿ ಒಟ್ಟಾಗಿ ಸ್ಪರ್ಧಿಸುತ್ತಿರುವುದನ್ನು ಉಲ್ಲೇಖಿಸಿದ್ದ ರಾವತ್, ಈ ಸುಳಿವು ನೀಡಿದ್ದರು. ಇದರ ನಡುವೆಯೇ ಬುಧವಾರ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ.