ಕಾರೊಂದು ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರ ಗಾಯಗೊಂಡ ಘಟನೆ ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಆಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.

ದಾಂಡೇಲಿಯಿಂದ ಹಳಿಯಾಳ ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದಿತ್ತು. ಇದರಿಂದ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದರು.

ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ದಾಂಡೇಲಿ ಗ್ರಾಮೀಣ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿ, ಸ್ಥಳೀಯರ ಸಹಕಾರದಿಂದ ಗಾಯಾಳುಗಳನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲದೇ, ಹೆಚ್ಚಿನ ಚಿಕಿತ್ಸೆಗೆ ಗಾಯಾಳುಗಳನ್ನು ಧಾರವಾಡ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಘಟನೆ ಸಂಬಂಧಿಸಿ ದಾಂಡೇಲಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.