Dandeli| ಇಲ್ಲಿನ ಕರ್ಕಾ ಕ್ರಾಸ್ ಅಜಗಾಂವ ಬಳಿ ಸೋಮವಾರ ತಡರಾತ್ರಿ ಭೀಕರ ರಸ್ತೆ ಅಪಘಾತವೊಂದರಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರು ಧಾರವಾಡದ ಫಾರೂಖ್ ಸಾಬ್ ಹಾಗೂ ಹಳಿಯಾಳದ ಮುದಸ್ಸಿರ್ ಇಸ್ಮಾಯಿಲ್ ಮುಲ್ಲಾ ಎಂದು ಗುರುತಿಸಲಾಗಿದೆ. ಇನ್ನು ಗಂಭಿರವಾಗಿ ಗಾಯಗೊಂಡ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂವರು ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಎರಡು ಮರಗಳ ನಡುವೆ ಸಿಲುಕಿಕೊಂಡಿದ್ದು, ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಹಳಿಯಾಳ ತಾಲೂಕು ಆಸ್ಪತ್ರೆಗೆ ಸಾಗಿಸಲಾಗಿದೆ.
