Bhatkal| ಇಲ್ಲಿನ ಮುರಿನಕಟ್ಟೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ನೂರಕ್ಕೂ ಹೆಚ್ಚು ಜನರ ಫೋಲಿಸರು ಪ್ರಕರಣ ದಾಖಲಿಸಿದ್ದಾರೆ.
ಗಲಭೆಯಲ್ಲಿ ಪಾತ್ರವಹಿಸಿದ್ದ ಹಿಂದೂ ಹಾಗೂ ಮುಸ್ಲಿಮರ ಮೇಲೆ ಪ್ರಕರಣ ದಾಖಲಾಗಿದೆ. 70 ಕ್ಕೂ ಹೆಚ್ಚು ಮುಸ್ಲಿಮರು ಹಾಗೂ 30 ಕ್ಕೂ ಹೆಚ್ಚು ಹಿಂದುಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಅಕ್ರಮ ತಂಡ ಕಟ್ಟಿ ಗಲಭೆ ನಡೆಸಿದ ಹಿನ್ನಲೆಯಲ್ಲಿ ಭಟ್ಕಳ ಮಾಜಿ ಶಾಸಕ ಸುನೀಲ್ ನಾಯ್ಕ ಸೇರಿದಂತೆ ಅನೇಕ
ಹಿಂದೂ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗಿದೆ.
ಇನ್ನು ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಅಕ್ರಮ ರಸ್ತೆ ತಡೆ, ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಅಶಾಂತಿ ಸೃಷ್ಠಿ ಹಿನ್ನೆಲೆಯಲ್ಲಿ ಮುಸ್ಲಿಮರ ಮೇಲೆ ಪೋಲಿಸರು ಪ್ರಕರಣ ದಾಖಲಿಸಿದ್ದಾರೆ.
