Bhatkal| 2025ನೇ ಸಾಲಿನ ಮುಖ್ಯಮಂತ್ರಿ ಚಿನ್ನದಪದಕದ ಗೌರವಕ್ಕೆ ಭಟ್ಕಳ ನಗರ ಪೊಲೀಸ್ ಠಾಣೆಯ ಪಿಎಸ್‌ಐ ನವೀನ ಎಸ್. ನಾಯ್ಕ ಅವರು ಭಾಜನರಾಗಿದ್ದಾರೆ.

ಪೊಲೀಸ್ ಇಲಾಖೆಯಲ್ಲಿನ ಅವರ ಅತ್ಯುತ್ತಮ ಹಾಗೂ ಶ್ಲಾಘನೀಯ ಸೇವೆಗಾಗಿ ಆಯ್ಕೆಯಾಗಿರುವ
ಪಿಎಸ್‌ಐ ನವೀನ ನಾಯ್ಕ ಅವರು ಉತ್ತರ ಕನ್ನಡ ಜಿಲ್ಲೆಯಲ್ಲಿ ಓರ್ವ ದಕ್ಷ ಹಾಗೂ ಪ್ರಾಮಾಣಿಕ ಪೊಲೀಸ್ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದಾರೆ.

ಪ್ರಸ್ತುತ ಭಟ್ಕಳ ನಗರ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿರುವ ಇವರು, ಈ ಹಿಂದೆ ಜಿಲ್ಲೆಯ ಕುಮಟಾ, ಗೋಕರ್ಣ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ತಮ್ಮ ಕರ್ತವ್ಯವನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿದ್ದರು.

ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಅವರ ಮುತುವರ್ಜಿ ಹಾಗೂ ಸುದೀರ್ಘ ಕಾಲದ ಈ ಸೇವೆಯನ್ನು ಗುರುತಿಸಿ ಸರ್ಕಾರ ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಿದೆ.