Bangalore| ಒಡಿಶಾದ ಭುವನೇಶ್ವರದಲ್ಲಿ ನಡೆದ 61ನೇ ‘ಫೆಮಿನಾ ಮಿಸ್ ಇಂಡಿಯಾ -2026’ ಕಿರೀಟ ಮುಡಿಗೇರಿಸಿಕೊಂಡಿರುವ ಕಾರವಾರ-ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಪುತ್ರಿ ಸಾಧ್ವಿ ಸತೀಶ್ ಸೈಲ್ ಅವರ ಸಾಧನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣ ‘X’ ನಲ್ಲಿ ಈ ಬಗ್ಗೆ ಪೋಸ್ಟ್ ಹಂಚಿಕೊಂಡಿರುವ ಅವರು, ಮಗಳ ಸಾಧನೆಯನ್ನು ಖುದ್ದು ಸತೀಶ್ ಸೈಲ್ ಅವರೇ ನನ್ನೊಂದಿಗೆ ಹಂಚಿಕೊಂಡು, ಹರ್ಷ ವ್ಯಕ್ತಪಡಿಸಿದರು. ಮಗಳ ಕನಸುಗಳಿಗೆ ಬೆಂಬಲವಾಗಿ ನಿಂತಿರುವ ಅವರನ್ನು ಕೂಡ ಇದೇ ವೇಳೆ ಅಭಿನಂದಿಸಿದೆ. 2027ರ ಮಿಸ್ ವರ್ಲ್ಡ್ ಸ್ಪರ್ಧೆಯಲ್ಲಿ ಭಾರತವನ್ನು ಸಾಧ್ವಿ ಪ್ರತಿನಿಧಿಸಲಿದ್ದು, ಅಲ್ಲಿಯೂ ಗೆಲುವು ಸಾಧಿಸಿ ಜಾಗತಿಕ ಮಟ್ಟದಲ್ಲಿ ರಾಜ್ಯದ ಕೀರ್ತಿ ರಾರಾಜಿಸುವಂತಾಗಲಿ ಎಂದು ಹಾರೈಸುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ‌.