ಭಾರತದ ಕ್ರಿಕೆಟ್ ತಂಡದ ಆಟಗಾರ ಕೆ.ಎಲ್. ರಾಹುಲ್ ರವರು ಇಂದು ಶ್ರೀಕ್ಷೇತ್ರ ಬಂಗಾರಮಕ್ಕಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ವೀರಾಂಜನೇಯ ದೇವರ ಆಶೀರ್ವಾದ ಪಡೆದರು.

ಕೆ.ಎಲ್ ರಾಹುಲ್ ಅವರು ಭಾರತ ಕ್ರಿಕೇಟ್ ತಂಡದ ಸ್ಪೋಟಕ ಬ್ಯಾಟ್ಸ್‌ಮನ್ ಹಾಗೂ ವಿಕೇಟ್ ಕೀಪರ್ ಆಗಿದ್ದು ಇವರು ಮೂಲತಃ ಕರ್ನಾಟಕದವರೇ ಆಗಿದ್ದಾರೆ.

ಸದ್ಯ ನಡೆಯುತ್ತಿರುವ T20 Worldcup ನಲ್ಲಿ ಸ್ಥಾನ ಗಳಿಸಲು ವಿಫಲವಾದ ರಾಹುಲ್ ಅವರು ಮುಂಬರುವ IPL ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಆಡಲು ತಯಾರಿ ನಡೆಸುತಿದ್ದಾರೆ‌.

ಇಂದು ಇವರು ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಬಂಗಾರಮಕ್ಕಿಯ ವೀರಾಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯಕ್ಕೆ ಆಗಮಿಸಿದ್ದ ಕ್ರಿಕೇಟಿಗ K L ರಾಹುಲ್ ಅವರನ್ನು ಗುರುಗಳಾದ ಶ್ರೀ ಮಾರುತಿ ಗುರೂಜಿ ಅವರು ಆಶಿರ್ವಧಿಸಿದರು.