ನವದೆಹಲಿ : ನೀಟ್ ಪತ್ರಿಕೆ ಸೋರಿ ವಿರೋಧಿಸಿ ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷದ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ಕೊನೆಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ಸಲ್ಲಿಸಿದ್ದಾರೆ.
ದೆಹಲಿಯ ಜಂತರ್ ಮಂತರ್ ನಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಕಳದ 23 ದಿನಗಳಿಂದ ಹೋರಾಡುತ್ತಿದ್ದ ವಿದ್ಯಾರ್ಥಿಗಳಿಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಯಿಂದ ಜಯ ಸಿಕ್ಕಂತಾಗಿದೆ.
ಇಂದು ಕೇಂದ್ರ ಸರ್ಕಾದ ಸಿಜೆಪಿ ಸಭೆ ಆರಂಭವಾಗುವ ಮುನ್ನವೇ ಧರ್ಮೇಂದ್ರ ಪ್ರಧಾನ ಅವರು ತಮ್ಮ ರಾಜೀನಾಮೆ ಪತ್ರವನ್ನು ಪ್ರಧಾನಿ ಮೋದಿಯವರಿಗೆ ಸಲ್ಲಿಸಿದ್ದಾರೆ.
ಕಳೆದ 23 ದಿನಗಳ ಹಿಂದೆ ಕಾಂಕ್ರೋಚ್ ಜನತಾ ಪಕ್ಷದ ಸ್ಥಾಪಕ ಅಭಿಜಿತ್ ದೀಪ್ಕೆ ಹಾಗೂ ಶಿಕ್ಷಣ ತಜ್ಞ ಸೋನಮ್ ವಾಂಗ್ಚುಕ್ ನೇತ್ರತ್ವದಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದರು. ಸೋನಮ್ ವಾಂಗ್ಚುಕ್ ಅವರನ್ನು ದೆಹಲಿ ಪೊಲೀಸರು ರಾತ್ರೋ ರಾತ್ರಿ ಆಸ್ಪತ್ರೆಗೆ ಕರೆದೊಯ್ದ ಪರಿಣಾನ ಜಿರಳೆಗಳ ಆಕ್ರೋಶಕ್ಕೆ ಕಾರಣವಾಗಿತ್ತು.
ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಸಾವಿರಾರು ವಿದ್ಯಾರ್ಥಿಗಳು ಜಂತರ್ ಮಂತರ್ ನಲ್ಲಿಸೇರಿ ಬೃಹತ್ ಪ್ರತಿಭಟನೆ ನಡೆಸಿದ ಪರಿಣಾಮ ಕೊನೆಗೂ ವಿದ್ಯಾರ್ಥಿಗಳ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ.
