Karwar|Electricity Interruption| ಕಾರವಾರ ಉಪವಿಭಾಗದ ವ್ಯಾಪ್ತಿಯಲ್ಲಿ ವಾಹಕ ಬದಲಾವಣೆ ಕಾಮಗಾರಿ ಇರುವುದರಿಂದ ಫೆ. 17 ರಂದು ಬೆಳಗ್ಗೆ 9.30 ರಿಂದ ಸಂಜೆ 6 ಗಂಟೆಯ ವರೆಗೆ ಬೈತಖೋಲ್ ಫೀಡರಿನ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇನ್ನು ಫೆ.18 ರಂದು ಸಹ ಬೆಳಗ್ಗೆ 9.30 ರಿಂದ ಸಂಜೆ 6 ಗಂಟೆಯ ವರೆಗೆ ಬೈತ್‌ಖೋಲ್ ಹಾಗೂ ಎನ್.ಎಚ್-17 ಫೀಡರಿನ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಗ್ರಾಹಕರು ಸಹಕರಿಸುವಂತೆ ಕಾರವಾರ ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್ (ವಿ) ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
