Karwar| ಇಲ್ಲಿನ ಶೃಂಗೇರಿ ಶಂಕರ ಮಠದಲ್ಲಿ ಮಾಜಿ ಸಚಿವ, ಜೆಡಿಎಸ್ ಧುರೀಣ ಆನಂದ ಅಸ್ನೋಟಿಕರ್ ವಿಧುಶೇಖರ ಭಾರತಿ ಸ್ವಾಮಿಗಳ ದರ್ಶನ ಮಾಡಿ, ಆಶಿರ್ವಾದ ಪಡೆದರು.
ಶೃಂಗೇರಿ ವಿಧುಶೇಖರ ಭಾರತೀ ಸ್ವಾಮಿಗಳು ‘ವಿಜಯ ಯಾತ್ರೆ’ ನಿಮಿತ್ತವಾಗಿ ಕಾರವಾರದ ಶೃಂಗೇರಿ ಶಂಕರ ಮಠಕ್ಕೆ ಆಗಮಿಸಿದ್ದು, ಈ ಸಂದರ್ಭದಲ್ಲಿ ಮಠಕ್ಕೆ ಆಗಮಿಸಿದ ಮಾಜಿ ಸಚಿವ ಆನಂದ ಅಸ್ನೋಟಿಕರ್ ವಿಧುಶೇಖರ ಭಾರತೀ ಸ್ವಾಮಿಗಳಿಗೆ ಫಲಪುಷ್ಪಗಳನ್ನು ಸಮರ್ಪಿಸಿ ಆಶೀರ್ವಾದ ಪಡೆದರು.
ಇಂದಿನಿಂದ ಏ.16 ರವರೆಗೆ ನಾಲ್ಕು ದಿನಗಳ ಕಾಲ ನಗರದಲ್ಲಿ ವಿಧುಶೇಖರ ಭಾರತೀ ಸ್ವಾಮಿಗಳ ‘ವಿಜಯಯಾತ್ರೆ’
ನಡೆಯಲಿದೆ. ಈ ಸಂದರ್ಭದಲ್ಲಿ ಹಲವು ಧಾರ್ಮಿಕ ಕಾರ್ಯಗಳನ್ನು ಆಯೋಜಿಸಲಾಗಿದೆ.
