ಕಾರವಾರ| ಪಕ್ಷ ಸಂಘಟನೆಗೆ ಪ್ರಶಿಕ್ಷಣ ವರ್ಗ ಪೂರಕವಾಗಿದೆ. ಇದರಿಂದ ಕಾರ್ಯಕರ್ತರಿಗೂ ಉಪಯುಕ್ತ ಮಾಹಿತಿ ಲಭ್ಯವಾಗಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಹೇಳಿದರು.

ಕಾರವಾರ ಗ್ರಾಮೀಣ ಮಂಡಲ ವತಿಯಿಂದ ಪುರುಷೋತ್ತಮ ಹಾಲ್ ನಲ್ಲಿ ಸಂಘಟಿಸಿದ್ದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ ಕಾರ್ಯಕ್ರಮ 2026 ರಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಗ್ರಾಮೀಣ ಮಂಡಲ ಅಧ್ಯಕ್ಷರಾದ ಸುಭಾಷ್ ಗುನಗಿ ಅಧ್ಯಕ್ಷತೆ ವಹಿಸಿದ್ದರು. ರೂಪಾಲಿ ಎಸ್ ನಾಯ್ಕ್ ಅವರು ಕಾರ್ಯಕ್ರಮಕ್ಕೆ ಬಂದ ಎಲ್ಲರಿಗೂ ಬ್ಯಾಗ್, ನೋಟಬುಕ್ ಮತ್ತು ಪೆನ್ ವಿತರಿಸಿದರು.

ವೇದಿಕೆಯಲ್ಲಿ ನಗರಸಭೆ ಮಾಜಿ ಅಧ್ಯಕ್ಷ ರವಿರಾಜ ಅಂಕೋಲೆಕರ, ನಗರ ಅಧ್ಯಕ್ಷ ನಾಗೇಶ್ ಕುರಡೇಕರ್, ಅಂಕೋಲಾ ಮಂಡಲ ಅಧ್ಯಕ್ಷ ಸಂಜಯ್ ನಾಯ್ಕ್, ಗ್ರಾಮೀಣ ಮಂಡಲ್ ಪ್ರಭಾರಿ ಗಜಾನನ್ ಗುನಗ, ಸುಬ್ರಾಯ್ ದೇವಾಡಿಗ, ಶ್ರೀಕಾಂತ್ ನಾಯ್ಕ್, ಸಂಜಯ್ ಸಾಳುಂಕೆ, ವಿಶೇಷ ಆಹ್ವಾನಿತರಾದ ನಯನಾ ನೀಲಾವರ್, ಸ್ಥಳೀಯರಾದ ಎಂ ಪಿ ರಾಣಿ, ಪ್ರಧಾನಿ ಕಾರ್ಯದರ್ಶಿ ಸೂರಜ್ ದೇಸಾಯಿ ಉಪಸ್ಥಿತರಿದ್ದರು.

ದೀಪ ಬೆಳಗಿಸಿ ಭಾರತ ಮಾತೆಗೆ ಪುಷ್ಪಾರ್ಚನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು, ರಾಜ್ಯ ಹಾಗೂ ಜಿಲ್ಲಾ ಪ್ರಭಾರಿ, ಚುನಾಯಿತ ಸದಸ್ಯರು, ಶಕ್ತಿಕೇಂದ್ರ ಹಾಗೂ ಮಹಾ ಶಕ್ತಿ ಕೇಂದ್ರ ಅಧ್ಯಕ್ಷರು, ಬಿಎಲ್ಎ-2, ಬೂತ್ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದರು.