Gokarn| Narcotic Drugs and Psychotropic Substances Act|
ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ ಆರೋಪದ ಮೇಲೆ ಅರ್ಜೆಂಟೀನಾ ದೇಶದ ಪ್ರವಾಸಿಗನನ್ನು ಪೊಲೀಸರು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿದ ಘಟನೆ ಗೋಕರ್ಣದಲ್ಲಿ ನಡೆದಿದೆ.
ಅರ್ಜೆಂಟೀನಾ ಮೂಲದ ಸ್ಯಾಂಟಿಗೋ ಆಸ್ಕರ್ ಲ್ಯುಕೆ ಮೆರ್ಲೋ (21), ಎಂಬ ಯುವಕ ಗಾಂಜಾ ಸೇವಿಸಿದ ಆರೋಪಿ
ಈತ ಗೋಕರ್ಣದ ಕೋಟಿತೀರ್ಥ ಬಳಿಯ ಸಾರ್ವಜನಿಕ ರಸ್ತೆಯ ಮೇಲೆ ಅಮಲಿನಲ್ಲಿ ತೇಲಾಡುತ್ತಿದ್ದ. ಸಂಶಯದ ಮೇಲೆ ಪೊಲೀಸರು ವಶಕ್ಕೆ ಪಡೆದು, ಮಾದಕ ವಸ್ತು ಸೇವನೆಯ ಬಗ್ಗೆ ಖಚಿತಪಡಿಸಿಕೊಳ್ಳಲು ಆತನನ್ನು ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ (PHC) ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.
ವೈದ್ಯಾಧಿಕಾರಿಗಳು ನಡೆಸಿದ ಮೂತ್ರ ಪರೀಕ್ಷೆಯಲ್ಲಿ Tetrahydrocannabinol (THC) ಮಾದಕ ಸೇವನೆಯ ಪಾಸಿಟಿವ್ ಬಂದಿದೆ.
ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ಎನ್.ಡಿ.ಪಿ.ಎಸ್. ಕಾಯ್ದೆ 27(b) ಕಲಂ ಅಡಿಯಲ್ಲಿ ಗೋಕರ್ಣ ಪೋಲಿಸರು ಪ್ರಕರಣ ದಾಖಲಿಸಿದ್ದಾರೆ.
