ಕಾರವಾರ: ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯಲ್ಲಿ 18 ರಿಂದ 50 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗ ಯುವಕ ಮತ್ತು ಯುವತಿಯರಿಗೆ ಆಗಸ್ಟ್ ತಿಂಗಳ ಮೊದಲ ವಾರದಿಂದ 30 ದಿನಗಳ ಇಲೆಕ್ಟ್ರೀಕಲ್‌ ವೇಹಿಕಲ್ ಸರ್ವಿಸಿಂಗ್ ಉಚಿತ ತರಬೇತಿ ಹಮ್ಮಿಕೊಳ್ಳಲಾಗಿದೆ.

ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಈ ತರಬೇತಿಯಿಂದ ಸ್ವ ಉದ್ಯೋಗ ಪ್ರಾರಂಭಿಸಿ ಸ್ವಾಲಂಬಿ ಜೀವನ ನಡೆಸಲು ಅನುಕೂಲವಾಗಲಿದ್ದು, ತರಬೇತಿ ಅವಧಿಯಲ್ಲಿ ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕೀಲ್, ಯೋಗ ತರಬೇತಿ ಹಾಗೂ ಬ್ಯಾಂಕಿನಿಂದ ಸಾಲ ಪಡೆದು ಸ್ವ ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ಉಚಿತವಾಗಿ ನೀಡಲಾಗುವುದು.

ಆಸಕ್ತ ಅಭ್ಯರ್ಥಿಗಳು ಜುಲೈ 25 ರೊಳಗಾಗಿ ತಮ್ಮ ಹೆಸರು, ವಿಳಾಸಗಳನ್ನು ದೂ.ಸಂ: 9483485489 ಮೂಲಕ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂ.ಸಂ: 9741330347 ಅಥವಾ 7204105812 ನ್ನು ಸಂಪರ್ಕಿಸುವಂತೆ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.