Karwar| ಅರಣ್ಯ ಪ್ರದೇಶದ ಗಿಡಗಂಟಿಗಳ ನಡುವೆ ಅಡಗಿಸಿಟ್ಟಿದ್ದ ಗೋವಾ ಮದ್ಯ, ಬಿಯರ್ ಸೇರಿ ಒಟ್ಟು 64,480 ಮೌಲ್ಯದ ಮದ್ಯವನ್ನು ಅಬಕಾರಿ ಸಿಬ್ಬಂದಿಗಳು ವಶಪಡಿಸಿಕೊಂಡ ಘಟನೆ ಕಾರವಾರ ತಾಲೂಕಿನ ಮೈಂಗಿಣಿ ಬಳಿಯ ಅರಣ್ಯಪ್ರದೇಶದಲ್ಲಿ ನಡೆದಿದೆ.
ಖಚಿತ ಮಾಹಿತಿ ಮೇರೆಗೆ ಮೈಂಗಿಣಿ ಹತ್ತಿರದ ಅರಣ್ಯ ಪ್ರದೇಶದಲ್ಲಿ ಅಬಕಾರಿ ಸಿಬ್ಬಂದಿಗಳು ದಾಳಿ ನಡೆಸಿದಾಗ ಅರಣ್ಯ ಪ್ರದೇಶದ ಗಿಡಗಂಟಿಗಳ ಎರಡು ಸ್ಥಳಗಳಲ್ಲಿ ಒಟ್ಟು ಐದು ನೈಲಾನ್ ಚೀಲಗಳಲ್ಲಿ ಗೋವಾ ಮದ್ಯವನ್ನು ಸಂಗ್ರಹಿಸಿಟ್ಟಿರುವುದು ಕಂಡು ಬಂದಿದೆ. ನಂತರ ಈ ಚೀಲ ತೆಗೆದು ಪರಿಶೀಲಿಸಿದಾಗ ಅದರಲ್ಲಿ 107 ಲೀ ಗೋವಾ ಮದ್ಯ ಮತ್ತು 12 ಲೀಟರ್ ಬಿಯರ್ ಪತ್ತೆಯಾಗಿದೆ.
ವಶಪಡಿಸಿಕೊಂಡ ಗೋವಾ ಮದ್ಯ ಅಂದಾಜು ಮೌಲ್ಯ 64,480 ಆಗಿದ್ದು, ಅಬಕಾರಿ ಇಲಾಖೆ ಪ್ರಕರಣ ದಾಖಲಿಸಿಕೊಂಡಿದೆ.
