Karwar| ಶೃಂಗೇರಿ ಶಾರಾದಾ ಪೀಠಾಧೀಶ್ವರ ವಿಧುಶೇಖರ ಭಾರತೀ ಸನ್ನಿಧಾನಂಗಳವರ ವಿಜಯಯಾತ್ರೆಯ ಸುಸಂದರ್ಭದಲ್ಲಿ ಪುರಾಣ ಪ್ರಸಿದ್ಧ ಶೇಜವಾಡ ಶೆಜ್ಜೇಶ್ವರ ದೇವಾಲಯದ ಪುನರ್ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ವಿಧುಶೇಖರ ಭಾರತೀ ಶ್ರೀಗಳಿಗೆ ನಾಳೆ ಏಪ್ರಿಲ್ 15, ಬುಧವಾರ ಸಂಜೆ 5 ಗಂಟೆಗೆ ಕಾರವಾರದ ಮಾಲಾದೇವಿ ಮೈದಾನದಲ್ಲಿ ಗುರುವಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಶ್ರೀಗಳನ್ನು ಮಾಲಾದೇವಿ ಮೈದಾನದ ವೇದಿಕೆಗೆ ಪೂರ್ಣಕುಂಭ ಹಾಗೂ ವೇದಘೋಷಗಳೊಂದಿಗೆ ಸ್ವಾಗತಿಸಲಾಗುವುದು. ಶ್ರೀಗಳು ದಿವ್ಯ ಸಾನ್ನಿಧ್ಯ ವಹಿಸಿ ಭಕ್ತರಿಗೆ ದರ್ಶನ, ಆಶೀರ್ವಾದಗಳನ್ನು ದಯಪಾಲಿಸಲಿದ್ದಾರೆ ಹಾಗೂ ಆಶೀರ್ವಚನ ಮಾಡಲಿದ್ದಾರೆ.

ಶ್ರೀಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯ ಉಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಎಂ.ಜಿ.ಉಮಾ ಅವರ ಮುಖ್ಯ ಉಪಸ್ಥಿತಿಯಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಉಡುಪಿ ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿರಲಿದ್ದಾರೆ. ಸಮಸ್ತ ಭಕ್ತರು, ನಾಗರಿಕರು ಆಗಮಿಸಿ ಶ್ರೀಗಳ ದರ್ಶನ, ಆಶೀರ್ವಾದ ಪಡೆಯುವಂತೆ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.