Haliyal| ತಾಲೂಕಿನ ಕಾಳಗಿನಕೊಪ್ಪ ಮನೆಯೊಂದರಲ್ಲಿ ಸೋಮವಾರ ಬೆಳಗ್ಗೆ ನಡೆದ ನಾಡ ಬಾಂಬ್ ಸ್ಪೋಟ ಪ್ರಕರಣಕ್ಕೆ ತಂದೆ ಹಾಗೂ ಮಗನ ಮೇಲೆ ಪೋಲಿಸರು Explosive Substances Act-1908 ಅಡಿ ಪ್ರಕರಣ ದಾಖಲಿಸಿದ್ದಾರೆ.
ವಸಂತ @ ವಾಸು (52) ಹಾಗೂ ಆತನ ಮುನೇಶ್ವರ ಎಂಬುವವರ ಮೇಲೆ ಪ್ರಕರಣ ದಾಖಲಾಗಿದೆ.
ಆರೋಪಿಗಳು ತಮ್ಮ ಮನೆಯಲ್ಲಿ ಕಾನೂನುಬಾಹಿರವಾಗಿ ಸ್ಫೋಟಕ ವಸ್ತುಗಳು ಹಾಗೂ ನಾಡ ಬಾಂಬ್ಗಳನ್ನು ಸಂಗ್ರಹಿಸಿಟ್ಟಿದ್ದರಿಂದ ಸೋಮವಾರ ಬೆಳಗಿನ ಜಾವ 5.10ರ ಸುಮಾರಿಗೆ ಏಕಾಏಕಿ ಸ್ಫೋಟ ಸಂಭವಿಸಿತ್ತು. ಸ್ಫೋಟದ ತೀವ್ರತೆಗೆ ಮನೆಯ ಮೇಲ್ಛಾವಣಿಯ ಹಂಚುಗಳು, ಅಡುಗೆ ಮನೆಯ ಕಿಟಕಿಯ ಗಾಜುಗಳು ಪುಡಿಯಾಗಿದ್ದು, ಸುತ್ತಮುತ್ತಲಿನ ಕೆಲವು ಮನೆಗಳಿಗೂ ಹಾನಿಯಾಗಿದೆ.
ಈ ಬಗ್ಗೆ ಕಾಳಗಿನಕೊಪ್ಪ ಗ್ರಾಮದ ಮಾರುತಿ ಅಪ್ಪಯ್ಯ ಬಿಡದೋಳಕರ ಎಂಬುವವರು ಹಳಿಯಾಳ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
