Karwar| ಭಾರತೀಯ ನೌಕಾಪಡೆಯ ವತಿಯಿಂದ ಕಾರವಾರ ತಾಲೂಕಿನ ಮುದಗಾದಲ್ಲಿ ಉಚಿತ ವೈದ್ಯಕೀಯ ಶಿಬಿರವನ್ನು ಆಯೋಜಿಸಲಾಯಿತು.

INHS Patanjali ಸಹಯೋಗದಲ್ಲಿ ನಡೆದ ಈ ಶಿಬಿರದಲ್ಲಿ ಒಟ್ಟು 259 ಮಂದಿ ಸ್ಥಳೀಯ ಮೀನುಗಾರರು ಹಾಗೂ ಅವರ ಕುಟುಂಬ ಸದಸ್ಯರಿಗೆ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆ ನೀಡಲಾಯಿತು.

ಶಿಬಿರದಲ್ಲಿ ವಿವಿಧ ಆರೋಗ್ಯ ಸಮಸ್ಯೆಗಳ ಪರಿಶೀಲನೆ ನಡೆಸಿ, ಅಗತ್ಯ ಔಷಧಿಗಳನ್ನು ಉಚಿತವಾಗಿ ವಿತರಿಸಲಾಯಿತು. ಗ್ರಾಮೀಣ ಹಾಗೂ ಕರಾವಳಿ ಪ್ರದೇಶದ ಮೀನುಗಾರ ಸಮುದಾಯದ ಆರೋಗ್ಯದ ಕಡೆ ವಿಶೇಷ ಗಮನಹರಿಸಲಾಗಿದ್ದು, ಅವರ ಆರೋಗ್ಯ ಸಮಸ್ಯೆಗಳ ಕುರಿತು ಮಾಹಿತಿ ಸಂಗ್ರಹಿಸಲಾಯಿತು.

ನೌಕಾಪಡೆ ಅಧಿಕಾರಿಗಳು ಮೀನುಗಾರರೊಂದಿಗೆ ಸಂವಹನ ನಡೆಸಿ, ಅವರ ಸಮಸ್ಯೆಗಳು ಹಾಗೂ ಅಗತ್ಯಗಳನ್ನು ಅರಿತುಕೊಳ್ಳಲು ಪ್ರಯತ್ನಿಸಲಾಯಿತು. ಕರಾವಳಿ ಭದ್ರತೆ ಮತ್ತು ಸುರಕ್ಷತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಮೀನುಗಾರರೊಂದಿಗಿನ ಸಹಕಾರ ಮುಂದುವರೆಯಲಿದೆ ಎಂದು ನೌಕಾಪಡೆ ತಿಳಿಸಿದೆ.