Karwar| ಉತ್ತರಕನ್ನಡ ಸೇರಿದಂತೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿಸಿ ಗಾಳಿ ಹಾಗೂ ಹೆಚ್ಚಿದ ತೇವಾಂಶದ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.
ಇಂದು ಮತ್ತು ನಾಳೆ ಈ ಮೂರು ಜಿಲ್ಲೆಗಳಲ್ಲಿ ಉಷ್ಣತೆ ಮತ್ತು ತೇವಾಂಶದ ಪ್ರಮಾಣ ಹೆಚ್ಚಾಗಿ ಅಸ್ವಸ್ಥಕರ ವಾತಾವರಣ ಉಂಟಾಗುವ ಸಾಧ್ಯತೆ ಇದೆ. ವಿಶೇಷವಾಗಿ ಮಧ್ಯಾಹ್ನ ವೇಳೆಯಲ್ಲಿ ಉಷ್ಣತೆ ಹೆಚ್ಚು ಅನುಭವವಾಗಲಿದ್ದು, ಜನರು ಜಾಗ್ರತೆ ವಹಿಸಬೇಕಾಗಿದೆ.
IMD ವರದಿ ಪ್ರಕಾರ, ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ “ಹಾಟ್ ಅಂಡ್ ಹ್ಯೂಮಿಡ್” ಪರಿಸ್ಥಿತಿ ಮುಂದುವರಿಯಲಿದೆ ಎಂದು ಸೂಚಿಸಲಾಗಿದೆ. ಈ ಹಿನ್ನೆಲೆ ಸಾರ್ವಜನಿಕರು ಬಿಸಿಲಿನಲ್ಲಿ ಅನಾವಶ್ಯಕವಾಗಿ ಹೊರಗೆ ಹೋಗುವುದನ್ನು ತಪ್ಪಿಸಿಕೊಳ್ಳಬೇಕು,ಸಾಕಷ್ಟು ನೀರು ಕುಡಿಯಬೇಕು, ಹಗುರವಾದ ಉಡುಪು ಧರಿಸಬೇಕು, ವೃದ್ಧರು ಹಾಗೂ ಮಕ್ಕಳು ವಿಶೇಷ ಜಾಗ್ರತೆ ವಹಿಸಬೇಕು ಎಂದು ಆರೋಗ್ಯ ಇಲಾಖೆ ಹಾಗೂ ಅಧಿಕಾರಿಗಳು ಸಲಹೆ ನೀಡಿದ್ದಾರೆ.
