ಜೊಯಿಡಾ:: ತಾಲೂಕಿನಾದ್ಯಂತ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಇಂದು ಜುಲೈ 23, 2026 (ಗುರುವಾರ) ರಂದು ಜೋಯಿಡಾ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಈ ಕುರಿತು ಜೋಯಿಡಾ ತಹಶೀಲ್ದಾರ್ ಆದೇಶ ಹೊರಡಿಸಿದ್ದು, ಹವಾಮಾನ ವೈಪರೀತ್ಯ ಮತ್ತು ನಿರಂತರ ಮಳೆಯ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಪಾಲಕರು ಹಾಗೂ ಸಾರ್ವಜನಿಕರು ಅನಗತ್ಯವಾಗಿ ಮಕ್ಕಳು ಮನೆಗಳಿಂದ ಹೊರಗೆ ತೆರಳದಂತೆ ಎಚ್ಚರಿಕೆ ವಹಿಸುವಂತೆ ಹಾಗೂ ಮಳೆ ಸಂಬಂಧಿತ ಮುನ್ನೆಚ್ಚರಿಕಾ ಸೂಚನೆಗಳನ್ನು ಪಾಲಿಸುವಂತೆ ಆಡಳಿತ ಮನವಿ ಮಾಡಿದೆ.