Karwar| ಉತ್ತರ ಕನ್ನಡ ಜಿಲ್ಲೆಯಲ್ಲಿ ರವಿವಾರ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ವ್ಯಾಪಕ ಮಳೆ ಸುರಿದಿದ್ದು, ಕುಮಟಾ ಸೇರಿದಂತೆ ಹಲವೆಡೆಯಲ್ಲಿನ ರಾಜ್ಯ ಹೆದ್ದಾರಿ ಸಹ ಜಲಾವೃತವಾಗಿ, ವಾಹನ ಸವಾರರು ಪರದಾಡುವಂತಾಗಿದೆ.

ಇನ್ನು ಪ್ರಸಿದ್ಧ ಧಾರ್ಮಿಕ ಸ್ಥಳ ಗೋಕರ್ಣದಲ್ಲೂ ಭಾರೀ ಮಳೆ ಸುರಿದಿದೆ. ಪರಿಣಾಮ ಪುರಾಣ ಪ್ರಸಿದ್ಧ ಮಹಾಬಲೇಶ್ವರ ದೇವಸ್ಥಾನದ ಗರ್ಭಗುಡಿವರೆಗೆ ನೀರು ನುಗ್ಗಿದೆ. ಭಕ್ತರಿಗೆ ಆತ್ಮಲಿಂಗ ಸ್ಪರ್ಶ ದರ್ಶನಕ್ಕೆ ನಿರ್ಬಂಧ ವಿಧಿಸಲಾಗಿದೆ. ಮಧ್ಯಾಹ್ನ 12:30 ರ ಮಹಾಪೂಜೆ ಮಾಡಲಾಗದಷ್ಟು ಸಮಸ್ಯೆಯಾಗಿತ್ತು. ಗೋಕರ್ಣದ ರಥ ಬೀದಿ ಸಂಪೂರ್ಣ ಜಲಾವೃತ್ತವಾಗಿತ್ತು.
ಕುಮಟಾದಲ್ಲೂ ಸಹ ವರುಣರಾಯ ಅರ್ಭಟಿಸಿದ್ದು, ಮಳೆಗೆ ವಾಲಗಳ್ಳಿ ಬಳಿಯ ರಾಜ್ಯ ಹೆದ್ದಾರಿ ಸಂಪೂರ್ಣ ಜಲಾವೃತಗೊಂಡಿದೆ. ಕುಮಟಾದಿಂದ ಸಿದ್ದಾಪುರಕ್ಕೆ ಸಂಪರ್ಕ ಕಲ್ಪಿಸುವ ಹೆದ್ದಾರಿ ಇದಾಗಿದೆ. ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ.
